ರಾಜಕೀಯ

ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು 

Views: 40

ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ್ ಮೃತಪಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದ 50 ವರ್ಷದ ಶಿವಕುಮಾರ್, ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶಿವಕುಮಾರ್ ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊಸಕೋಟೆ–ದಾಬಸ್‌ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಾಗಣೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಓವರ್‌ಟೇಕ್ ಮಾಡಲು ಪ್ರಯತ್ನಿಸಿದ ಸಂದರ್ಭದಲ್ಲಿ ಅತಿವೇಗದಿಂದ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಸಂಭವಿಸಿದೆ.

Related Articles

Back to top button
error: Content is protected !!