ಇತರೆ

ರಸ್ತೆ ಅಪಘಾತ ಪ್ರಕರಣಕ್ಕೆ ತನಿಖೆ ವೇಳೆ ಬಿಗ್ ಟ್ವಿಸ್ಟ್: ಪೂರ್ವಯೋಜಿತ ಕೃತ್ಯ ಶಂಕೆ! 

Views: 15

ಕನ್ನಡ ಕರಾವಳಿ ಸುದ್ದಿ:ಆರಂಭದಲ್ಲಿ ರಸ್ತೆ ಅಪಘಾತ ಎಂದು ಭಾವಿಸಲಾಗಿದ್ದ ವ್ಯಕ್ತಿಯ ಸಾವಿನ ಪ್ರಕರಣಕ್ಕೆ ತನಿಖೆ ವೇಳೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಂಧ್ರಪ್ರದೇಶದ ಪೀಲೇರಿಯಲ್ಲಿ ಸುಬ್ರಹ್ಮಣ್ಯಂ ಅವರ ಸಾವು ಅಪಘಾತವಲ್ಲ, ಪೂರ್ವಯೋಜಿತ ಕೃತ್ಯವಾಗಿರಬಹುದು ಎಂಬ ಶಂಕೆ ಪೊಲೀಸರಿಗೆ ಮೂಡಿದೆ.

ಪತಿ-ಪತ್ನಿಯ ನಡುವಿನ ಕೌಟುಂಬಿಕ ಕಲಹ ಹಾಗೂ ಮತ್ತೊಬ್ಬ ವ್ಯಕ್ತಿಯೊಂದಿಗಿನ ಸಂಬಂಧದ ವಿಚಾರ ತನಿಖೆಯಲ್ಲಿ ಮುನ್ನೆಲೆಗೆ ಬಂದಿದೆ ಎನ್ನಲಾಗಿದೆ.

ಮನೆಯಲ್ಲಿ ನಡೆದ ಘಟನೆ ಬಳಿಕ ಮೃತದೇಹವನ್ನು ಹೆದ್ದಾರಿ ಬದಿಗೆ ಸ್ಥಳಾಂತರಿಸಿ, ಘಟನೆ ಅಪಘಾತದಂತೆ ಕಾಣುವಂತೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಪತ್ನಿ ಹಾಗೂ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!