ಇತರೆ

ರಸ್ತೆ ಅಪಘಾತ: ಸ್ಥಳದಲ್ಲೇ ಮೃತಪಟ್ಟ ದಂಪತಿ

Views: 0

ಬೆಂಗಳೂರು: ಅತಿ ವೇಗವಾಗಿ ಬಂದ ಗೂಡ್ಸ್​ ವಾಹನವೊಂದು ಹಿಂಬದಿಯಿಂದ ಬೈಕ್​​ಗೆ ರಭಸವಾಗಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ನಡೆದಿದೆ.

ಬೈಯಣ್ಣ (55), ನಿರ್ಮಲಾ (45) ಮೃತ ದಂಪತಿ. ಇವರು ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ರಭಸದಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಈ ಸಂಬಂಧ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Related Articles

Back to top button
error: Content is protected !!