ಯುವಜನ
ರಸ್ತೆ ಗುಂಡಿಗೆ ಬಿದ್ದು ಬೈಕ್ನ ಹಿಂಬದಿ ಕುಳಿತಿದ್ದ ಯುವತಿ ಸಾವು
Views: 1
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ಯಮರೂಪಿ ರಸ್ತೆ ಗುಂಡಿಯಿಂದಾಗಿ ಅಮಾಯಕ ಮಹಿಳೆಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ನಡೆದಿದೆ. ಕೇರಳ ಮೂಲದ ಮೇಧಾ (32) ಮೃತಪಟ್ಟ ದೌರ್ಭಾಗ್ಯಕರ ಯುವತಿ. ಈಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ (EPFO) ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.
ಮೇಧಾ ಅವರು ತಮ್ಮ ಸ್ನೇಹಿತ ಅಜಯ್ ಗುರು ಅವರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಮುಂದೆ ಹೋಗುತ್ತಿದ್ದ ಕಾರು ಏಕಾಏಕಿ ಬ್ರೇಕ್ ಹಾಕಿದೆ. ಈ ವೇಳೆ ಬೈಕ್ನ ಹಿಂಬದಿ ಕುಳಿತಿದ್ದ ಮೇಧಾ ಅವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಮೇಧಾ ಅವರ ಕತ್ತಿನ ಭಾಗದ ಮೇಲೆ ಹರಿದ ಪರಿಣಾಮ, ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.






