ರಸ್ತೆ ದಾಟುತ್ತಿದ್ದ ವೇಳೆ ಆಟೋ ಡಿಕ್ಕಿ: ಸ್ನಾತಕೋತ್ತರ ವಿದ್ಯಾರ್ಥಿನಿ ಸಾವು
Views: 15
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ರಸ್ತೆ ಅಪಘಾತ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ಮಾನಸಾ (23) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಮಾನಸಾ ಅವರು ದೃಶ್ಯಕಲಾ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಆಗಿದ್ದರು. ಜುಲೈ 30ರಂದು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಕಡೆಯಿಂದ ನಾಗರಬಾವಿ ವೃತ್ತದ ಕಡೆಗೆ ತೆರಳುತ್ತಿದ್ದ ಆಟೊವೊಂದು ಗಾಂಧಿ ಮಾರ್ಗ ರಸ್ತೆಯನ್ನು ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಆದರೆ, ದುರಾದೃಷ್ಟವಶಾತ್ ಬುಧವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ದೃಶ್ಯಕಲಾ ವಿಭಾಗದ ವಿಭಾಗದ ಸ್ನಾತಸ್ನಾತಕೋತ್ತರ ಮೊದಲನೇ ವರ್ಷದ ವಿದ್ಯಾರ್ಥಿನಿ ಮಾನಸ ಜುಲೈ 30 ರಂದು ಮಧ್ಯಾಹ್ನ ಪರೀಕ್ಷೆ ಮುಗಿಸಿ, ಗಾಂಧಿ ಮಾರ್ಗ ರಸ್ತೆಯಲ್ಲಿರುವ ಕ್ಯಾಂಟೀನ್ ಎದುರು ರಸ್ತೆ ದಾಟುತ್ತಿದ್ದಾಗ, ಆಟೋದಿಂದ ಅಪಘಾತಕ್ಕೀಡಾಗಿ ನಾಗರಭಾವಿಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಐಸಿಯು ವಾರ್ಡಿ ನಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಅಪಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಬೆನ್ನಲ್ಲೇ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಜ್ಞಾನಭಾರತಿ ಆವರಣ ದೊಳಗೆ ಸಾರ್ವಜನಿಕ ವಾಹನ ಸಂಚಾರ ನಿಯಂತ್ರಣಕ್ಕೆ ಆಗ್ರಹಿಸಿದ್ದಾರೆ. ಕ್ಯಾಂಪಸ್‌ನಲ್ಲಿ ಕುಳಿತು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.






