ಇತರೆ
ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

Views: 0
ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ನೆಲ್ಯಾಡಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.
ಸವಾರನನ್ನು ನೆಲ್ಯಾಡಿ ಇಕ್ಬಾಲ್ ಎಂದು ಗುರುತಿಸಲಾಗಿದೆ.
ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸಲ್ ಸಾಗಾಟ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






