ಇತರೆ

ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬಸ್! 

Views: 65

ಕನ್ನಡ ಕರಾವಳಿ ಸುದ್ದಿ: ಕಾರಿನ ಮೇಲೆ ಪ್ರವಾಸಿಗರ ಬಸ್‌ವೊಂದು ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಸದ್ಯ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!