ಜನಮನ

ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಶೀತ ಮಾರುತದ ಎಚ್ಚರಿಕೆ! ಯೆಲ್ಲೋ ಅಲರ್ಟ್ ಘೋಷಣೆ

Views: 123

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆ ಕೂಡ ಇದೆ.

ಹಾಗೆಯೇ ದಾವಣಗೆರೆ, ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಎಚ್ಚರಿಕೆಯಿಂದ ಇರುವಂತೆ ಕಠಿಣ ಸೂಚನೆ ಹೊರಡಿಸಲಾಗಿದೆ.

ಜ. 10 ಹಾಗೂ 11 ರಂದು ಬೆಂಗಳೂರು ನಗರ, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button
error: Content is protected !!