ಇತರೆ
ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Views: 293
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲರ್ಟ್ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






