ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳ ರದ್ದು!
Views: 202
ಕನ್ನಡ ಕರಾವಳಿ ಸುದ್ದಿ: ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆದರೆ, ಇದನ್ನು ಅನರ್ಹರು ಕೂಡ ಪಡೆದುಕೊಂಡಿದ್ದು, ಇಂತಹವರಿಗೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಅವರನ್ನು ಎಪಿಎಲ್‌ಗೆ ವರ್ಗಾಹಿಸುತ್ತಿದೆ.
ರಾಜ್ಯದಲ್ಲಿ ತುಂಬಾ ಮಂದಿ ನಿಯಮಗಳನ್ನು ಗಾಳಿಗೆ ತೂರಿ ಅರ್ಹರಲ್ಲದಿದ್ದರೂ ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಡವರ ಅನ್ನ ಭಾಗ್ಯ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದು, ಇಂತಹವರ ವಿರುದ್ಧ ಆಹಾರ ಇಲಾಖೆ ಇದೀಗ ಸಮರ ಸಾರಿದೆ. ಈಗಾಗಲೇ ಪರಿಶೀಲನೆ ವೇಳೆ ಹಲವರ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ, ಎಪಿಎಲ್‌ಗೆ ವರ್ಗಾಹಿಸಿದೆ. ಇನ್ನೂ ಕೂಡ ಈ ಮಹತ್ವದ ಕಾರ್ಯವನ್ನು ಮಾಡುತ್ತಲಿದೆ.
ರಾಜ್ಯದಲ್ಲಿ ಅರ್ಹತಾ ನಿಯಮಗಳನ್ನು ಮೀರಿ 2,00,000ಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದುಪಡಿಸಿದೆ. ಈ ಎಲ್ಲಾ ಕಾರ್ಡ್‌ಗಳನ್ನು ಎಪಿಎಲ್ ಪಡಿತರ ಚೀಟಿಗಳಿಗೆ ವರ್ಗಾಹಿಸಲಾಗಿದೆ. ಇದರಿಂದಾಗಿ ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳನ್ನು ಸರ್ಕಾರದ ಅನ್ನಭಾಗ್ಯ ಯೋಜನೆಯಿಂದ ಹೊರತಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 7.76 ಲಕ್ಷ ಪಡಿತರ ಚೀಟಿಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರದ ಕುಟುಂಬ ತಂತ್ರಾಂಶದ ದತ್ತಾಂಶದ ಅನ್ವಯ 13.87 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳು ಅನರ್ಹರ ಬಳಿ ಇರುವುದು ಪತ್ತೆ ಆಗಿದೆ. ಈ ಹಿನ್ನೆಲೆ ಇಲಾಖೆ ಹಂತ-ಹಂತವಾಗಿ ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸುವ ಪ್ರಕ್ರಿಯೆ ಮುಂದುವರೆಸಿದೆ.
ಇನ್ನು ಈ ವೇಳೆ ಅರ್ಹ ಫಲಾನುಭವಿಗಳ ಕಾರ್ಡ್‌ಗಳು ರದ್ದಾದಾದರೆ, ಅಂತಹರವು ಭಯ ಪಡುವ ಅಗತ್ಯ ಇಲ್ಲ. ಅರ್ಹತೆ ಇದ್ದರೂ ತಮ್ಮ ಬಳಿಯ ಬಿಪಿಎಲ್ ರದ್ದಾಗಿದ್ದರೆ, ಅಂತಹವರು 45 ದಿನಗಳ ಒಳಗೆ ಅಗತ್ಯ ದಾಖಲೆಗಳ ಸಮೇತ ತಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಕೆ ಮಾಡಬಹುದು. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅರ್ಹತೆ ಎಂದು ಖಚಿತ ಪಟ್ಟರೆ, ಬಿಪಿಎಲ್ ಕಾರ್ಡ್ ಅನ್ನು ಮತ್ತೆ ಮರುಸ್ಥಾಪನೆ ಮಾಡಲಿದ್ದಾರೆ ಎಂದು ಇಲಾಖೆ ತಿಳಿಸಿದೆ.






