ರಾಜ್ಯದ ವಿವಿಧೆಡೆ ಭಾರಿ ಮಳೆ ನಿರೀಕ್ಷೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ
Views: 45
ಕನ್ನಡ ಕರಾವಳಿ ಸುದ್ದಿ: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲ ಸ್ಥಳಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ವಾಸಿಸುವವರು ಹಾಗೂ ಮೀನುಗಾರರು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ತನ್ನ ಸಂಪೂರ್ಣ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ವರದಿ ಪ್ರಕಾರ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ.
ಜುಲೈ 1 ರಿಂದ ಜುಲೈ 3 ರವರೆಗೆ ಮಾನ್ಸೂನ್ ಸಕ್ರಿಯವಾಗಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ, ಕರಾವಳಿ ಪ್ರದೇಶ ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ
ಯಾವೆಲ್ಲಾ ಜಿಲ್ಲೆಗಳಿಗೆ ಅಪಾಯ?- ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಹೆಚ್ಚಿರಲಿದೆ. ಇಲ್ಲಿನ ಜನರಿಗಾಗಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ಮಳೆಯಾಟ ಜೂನ್ 30ರ ವೇಳೆಗೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಜುಲೈ 1 ರಿಂದ ಜುಲೈ 3 ರವರೆಗೆ ಮಾನ್ಸೂನ್ ಇನ್ನಷ್ಟು ಸಕ್ರಿಯವಾಗಿರಲಿದೆ ಎಂದು ಇಲಾಖೆ ತಿಳಿಸಿದೆ.






