ರಾಜ್ಯದ 6,000ಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್‌ದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್!
Views: 132
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ 6,000 ಅಧಿಕ ಮಂದಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ ಶ್ರೀಮಂತರೂ ಅಂದರೆ, ಅನರ್ಹರು ಕೂಡ ಈ ಪಡಿತರ ಚೀಟಿ ಪಡೆದುಕೊಂಡು ಬಡವರಿಗೆ ಸಿಗಬೇಕಾದ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಇದಕ್ಕೆಲ್ಲ ಫುಲ್ ಸ್ಟಾಪ್ ಇಡುವ ಕೆಲಸ ಮಾಡುತ್ತಿದೆ. ಕೆಲ ಅನರ್ಹರನ್ನು ಎಪಿಎಲ್‌ಗೆ ವರ್ಗಾಹಿಸಿದರೆ, ಇನ್ನೂ ಕೆಲವರ ವಿರುದ್ಧ ದಂಡಾಸ್ತ್ರಾಕ್ಕೂ ಕೂಡ ಮುಂದಾಗಿದೆ. ಈ ನಡುವೆಯೇ 6,000 ಅಧಿಕ ಮಂದಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದೆ.
ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿದ ರಿಟರ್ನ್ಸ್ ಪ್ರತಿಯ ಮಾಹಿತಿ ಆಧಾರವಾಗಿಟ್ಟುಕೊಂಡು ಇಲ್ಲಿನ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಬರೀ ಅಕ್ಟೋಬರ್ ತಿಂಗಳಲ್ಲೇ 6,200 ಮಂದಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಮಾಡಿ, ಅವರನ್ನು ಎಪಿಎಲ್‌ಗೆ ವರ್ಗಾಹಿಸಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರ ಪತ್ತೆ ಕಾರ್ಯರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀವ್ರಗೊಳಿಸಿದೆ. 25,00,000ಕ್ಕಿಂತ ಅಧಿಕ ಮೊತ್ತದ ಜಿಎಸ್‌ಟಿ ಪಾವತಿಸಿರುವ 50ಕ್ಕೂ ಹೆಚ್ಚು ವಹಿವಾಟುಗಳನ್ನು ಗುರುತಿಸಿ ಅವರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ಬಿಪಿಎಲ್‌ಗೆ ವರ್ಗಾಹಿಸಲಾಗಿದೆ ಎಂದು ತಿಳಿದುಬಂದಿದೆ.
ಬ್ಯಾಂಕ್ ಖಾತೆಗೆ ಜೋಡಣೆ ಆದ ಆಧಾರ್ ಸಂಖ್ಯೆ ಹಾಗೂ ಐಟಿ ರಿಟರ್ನ್ಸ್ ರಸೀದಿ ಆಧರಿಸಿದ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಯಿಂದ ಪಡೆದು ಈ ಅನರ್ಹ ಬಿಪಿಎಲ್ ಪಡಿತರದಾರರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆ ಇನ್ನೂ ಮುಂದುವರೆಯಲಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಅವಿನ್ ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 3.80 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಕೇಂದ್ರದ ಮಾನದಂಡವನ್ನು ಆಧರಿಸಿ, ಸ್ವಂತ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಪ್ರಕ್ರಿಯೆಯನ್ನು ಇನ್ನೂ ಆರಂಭಿಸಿಲ್ಲ. ಆದರೆ, ಅನರ್ಹರ ಪತ್ತೆಕಾರ್ಯ ಮಾತ್ರ ಮುಂದುವರೆಯಲಿದೆ ಎಂದು ತಿಳಿಸಿದರು.
ಇನ್ನೂ ಜಿಲ್ಲೆಯಲ್ಲಿ ಹೊಸದಾಗಿ 3,400 ಜನ ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅವುಗಳನ್ನು ಪರಿಶೀಲನೆ ಮಾಡಿ ಅರ್ಹರನ್ನು ಗುರುತಿಸಲಾಗುತ್ತದೆ. ನವೆಂಬರ್ ಅಂತ್ಯದ ವೇಳೆಗೆ ಹೊಸ ಕಾರ್ಡ್ ವಿತರಣೆಗೆ ಸರ್ಕಾರದಿಂದ ಅನುಮತಿ ದೊರೆಯಲಿದೆ. ಬಳಿಕ ಕಾರ್ಡ್ ವಿತರಣೆ ಮಾಡಲಿದ್ದೇವೆ ಎಂದು ಹೇಳಿದರು. ಮತ್ತೊಂದೆಡೆ ರಾಜ್ಯದಲ್ಲಿ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ಸಹ ಎಪಿಎಲ್‌ಗೆ ವರ್ಗಾಹಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಉತ್ತರಿಸಿ ಈ ಸಮಸ್ಯೆ ಬಗೆಹರಿಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ. ಹೇಗಂದ್ರೆ, ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್ ಕಾರ್ಡ್ ರದ್ದಾಗಿವೆಯೋ ಅಂತಹವರು ತಮ್ಮ ತಾಲ್ಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಮತ್ತೆ ಅರ್ಜಿ ಸಲ್ಲಿಕೆ ಮಾಡಿ ಬಿಪಿಎಲ್ ಕಾರ್ಡ್ ಮರುಪಡೆಯಬಹುದು ಎಂದು ಸ್ಪಷ್ಟನೆ ನೀಡಿದೆ. ಈ ಮೂಲಕ ಜನರಲ್ಲಿದ್ದ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಮಾಡಿದೆ.






