ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಮಿಂಚಿದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದ ವಿದ್ಯಾರ್ಥಿ ಸಮಿತ್ ಶೆಟ್ಟಿ
Views: 2
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದ 10ನೇ ತರಗತಿಯ ವಿದ್ಯಾರ್ಥಿ ಸಮಿತ್ ಶೆಟ್ಟಿ 17ರ ವಯೋಮಾನದ 110 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ.

ನಿರಂತರ ಅಭ್ಯಾಸ, ದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ ಹಾಗೂ ಕಠಿಣ ಪರಿಶ್ರಮದ ಮೂಲಕ ರಾಜ್ಯಮಟ್ಟದಲ್ಲಿ ಈ ಗಮನಾರ್ಹ ಸಾಧನೆ ಮಾಡಿರುವ ಸಮಿತ್ ಶೆಟ್ಟಿ ಗ್ರಾಮೀಣ ಪ್ರತಿಭೆಗಳು ರಾಜ್ಯ ಮಟ್ಟದಲ್ಲಿಯೂ ಮಿಂಚಬಲ್ಲವು ಎಂಬುದನ್ನು ಸಾಬೀತುಪಡಿಸಿದ್ದಾನೆ.
ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ ಸತೀಶ್ ಅವರ ಮಾರ್ಗದರ್ಶನ, ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ಸಮಿತ್ನ ಈ ಸಾಧನೆಗೆ ಮಹತ್ವದ ಕೊಡುಗೆ ನೀಡಿವೆ. ವಿದ್ಯಾರ್ಥಿಯ ಈ ಯಶಸ್ಸು ಶಾಲೆಯ ಕ್ರೀಡಾ ಕ್ಷೇತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.
ಸಮಿತ್ನ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಶಾಲೆಯ ಕೀರ್ತಿಯನ್ನು ಬೆಳಗಿಸಲಿ ಎಂದು ಶುಭ ಹಾರೈಸಿದ್ದಾರೆ.






