ಶಿಕ್ಷಣ

ರಾಜ್ಯಮಟ್ಟದ ರಸಪ್ರಶ್ನೆ: ದ್ವಿತೀಯ ಬಹುಮಾನ ಪಡೆದ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು

Views: 192

ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣದ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025-26 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮದರ್ ತೆರೇಸಾ ಶಾಲೆಯ 10ನೇ ತರಗತಿಯ ಉದಯೋನ್ಮುಖ ಪ್ರತಿಭೆಗಳಾದ ಪ್ರೀತಮ್ ಜಿ ಪೂಜಾರಿ ಹಾಗೂ ರಿಷಿ ಶೆಟ್ಟಿ ಈ ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸಂಸ್ಥೆಗೆ ಹೆಸರು ತಂದಿರುತ್ತಾರೆ. ಈ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಹಾಗೂ ಕುಮಾರಿ ರೆನಿಟಾ ಲೋಬೋರವರು, ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿ ಇವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿರುತ್ತಾರೆ.

Related Articles

Back to top button
error: Content is protected !!