ಆರ್ಥಿಕ
ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 15,428 ಹುದ್ದೆಗಳ ಭರ್ತಿಗೆ ಅನುಮೋದನೆ

Views: 233
ಬೆಂಗಳೂರು, ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತು ನೀಡಲಾಗಿದ್ದು, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆಯಾಗಿ ಬಾಕಿ ಉಳಿದಿದ್ದ 670 ಹುದ್ದೆಗಳೂ ಸೇರಿದಂತೆ ಒಟ್ಟು 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದರು.






