ರಾಜ್ಯ ಅಧ್ಯಕ್ಷರ ನೇಮಕದ ಬಗ್ಗೆ ಮಾಹಿತಿ ಇಲ್ಲ; ರಾಜ್ಯ ರಾಜಕಾರಣಕ್ಕೆ ಬರಲ್ಲ: ಶೋಭಾ ಕರಂದ್ಲಾಜೆ

Views: 0
ರಾಜ್ಯ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ. ಅಲ್ಲಿಯೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಇಚ್ಛೆಯಿಲ್ಲ. ಕೇಂದ್ರದಲ್ಲಿ ಒಳ್ಳೆಯ ಸಚಿವ ಸ್ಥಾನ ಕೊಟ್ಟಿದ್ದಾರೆ. ಕೇಂದ್ರ ಸಚಿವೆಯಾಗಿಯೇ ಮುಂದುವರೆಯುತ್ತೇನೆ ಎಂದು ಹೇಳಿರುವುದು ಅವರು ರಾಜ್ಯ ಬಿಜೆಪಿ ಅಧ್ಯಕ್ಷಗಿರಿಯನ್ನು ಒಪ್ಪಿಕೊಳ್ಳುತ್ತಾರೋ, ಇಲ್ಲವೋ ಎಂಬ ಚರ್ಚೆಗೂ ಕಾರಣವಾಗಿದೆ.
ರಾಜ್ಯ ಬಿಜೆಪಿಯ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಈ ರೀತಿಯ ಸುದ್ದಿಗಳು ಹೇಗೆ ಬರುತ್ತವೆಯೋ ನನಗೆ ಗೊತ್ತಿಲ್ಲ ಎಂದು ಶೋಭ ಕರಂದ್ಲಾಜೆ ಹೇಳಿ, ಮುಂದಿನ ಬಾರಿಯೂ ನರೇಂದ್ರ ಮೋದಿಯವರು ಪ್ರಧಾನಿಯಾಗಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.






