ರಾಜಕೀಯ

ರಾಜ್ಯ ನಾಯಕತ್ವ ಸುದೀರ್ಘ ಚರ್ಚೆ:ಅಂತಿಮ ನಿರ್ಧಾರಕ್ಕೆ ಬರಲು ಹೈಕಮಾಂಡ್ ವಿಫಲ!

Views: 44

ಕನ್ನಡ ಕರಾವಳಿ ಸುದ್ದಿ: ದೆಹಲಿಯ 10 ಜನಪಥ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಶನಿವಾರ ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದ ಸರಕಾರದ ವಿಚಾರವೂ ಚರ್ಚೆಯಾಗಿದೆ. ಸತತ ಎರಡು ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ. ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕೂಡ ಚರ್ಚೆ ನಡೆದಿದ್ದು, ಆದರೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತಿಕ್ಕಾಟ ನಡೆಯುತ್ತಿದೆ ಎಂದು ಇತ್ತೀಚೆಗೆ ನಿರಂತರವಾಗಿ ವರದಿಗಳಾಗುತ್ತಿವೆ. ಇಬ್ಬರೂ ನಾಯಕರು ಸತತವಾಗಿ ಸಭೆ ನಡೆಸುತ್ತಿರುವುದು ಎಲ್ಲರ ಗಮನಕ್ಕೆ ಬಂದಿದೆ. ಇದರ ನಡುವೆ ಇತ್ತೀಚೆಗೆ ಇಬ್ಬರೂ ಒಟ್ಟಿಗೆ ಉಪಾಹಾರ ಮಾಡುವ ಬಳಿಕ ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದರು. ಆದರೆ ಶನಿವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ತ್ವದ ಚರ್ಚೆ ನಡೆದಿದ್ದು, ಆದರೆ ಹೈಕಮಾಂಡ್ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.

ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿದ್ದು, ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

Related Articles

Back to top button