ಇತರೆ
ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ವಿಠಲ ವಿ. ಗಾಂವ್ಕರ್ ನಿಧನ
Views: 94
ಕನ್ನಡ ಕರಾವಳಿ ಸುದ್ದಿ: ಕೋಟ ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ, ಅಂಕೋಲ ನಿವಾಸಿ ವಿಠಲ ವಿ. ಗಾಂವ್ಕರ್ (75) ಅಗಸ್ಟ್.14ರಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾಗಿ ನಿವೃತ್ತರಾದ ಗೀತಾ ವಿ. ಗಾಂವ್ಕರ್, ಕೋಟ ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿವೇಕಾನಂದ ವಿ. ಗಾಂವ್ಕರ್ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಅಂಕೋಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಉಡುಪಿ ಜಿಲ್ಲೆಯ ಬಾರಕೂರಿನಲ್ಲಿ ನಡೆದ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಸ್ಥಾನ ಅಲಂಕರಿಸಿದ್ದರು. ನಿವೃತ್ತಿಯ ಬಳಿಕ ಅಂಕೋಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.






