ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ಶಾಕ್..! ಹೆಚ್‌ಡಿಕೆ ಜೊತೆ ರಮೇಶ ಜಾರಕಿಹೊಳಿ ತಂಡ ಮಹತ್ವದ ಮೀಟಿಂಗ್

Views: 115

ಕನ್ನಡ ಕರಾವಳಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಸದ್ಯಕ್ಕಂತೂ ನಿಲ್ಲುವಂತೆ ಕಾಣಿಸುತ್ತಿಲ್ಲ. ಶಾಸಕ ಯತ್ನಾಳ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಭಿನ್ನಮತ ಉಂಟಾಗಿದೆ. ಈ ಸಂಬಂಧ ಮಧ್ಯಸ್ಥಿಕೆ ವಹಿಸಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಿಂದೇಟು ಹಾಕಿದ್ದಾರೆ.

ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಶಾಸಕ ರಮೇಶ್ ಜಾರಕಿಹೊಳಿ ಹಾಗೂ ತಂಡ ಭೇಟಿ ಮಾಡಿದೆ. ಈ ವೇಳೆ ನಾಯಕರು ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಭಿನ್ನಮತದ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಮಾತಾಡುವಂತೆ ನಾಯಕರು ಮನವಿ ಮಾಡಿದ್ದಾರೆ. ಆದರೆ ಬಿಜೆಪಿ ಭಿನ್ನಮತದ ಬಗ್ಗೆ ಚರ್ಚೆ ಮಾಡಲು ಆಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಸಲಹೆ ನೀಡಬೇಕಿದ್ದರೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಬಳಿ ಹೇಳೋಣ. ಇಲ್ಲವೇ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸೋಣ. ಆದರೆ ಆಂತರಿಕ ಜಗಳದ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Related Articles

Back to top button
error: Content is protected !!