ರಾಜಕೀಯ

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ?

Views: 0

ರಾಜ್ಯ ಬಿಜೆಪಿ ಘಟಕಕ್ಕೆ ಹೊಸ ನಾಯಕನನ್ನು ನೇಮಕ ಮಾಡುವ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಕುರಿತು ಚರ್ಚೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಲ್ಲಲ್ಲಿ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ರಾಜ್ಯ ಬಿಜೆಪಿ ಘಟಕಕ್ಕೆ ಈ ವಾರದಲ್ಲಿಯೇ ಹೊಸ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಗಳು ಇವೆ.

ಪುದುಚೇರಿ, ನಾಗಾಲ್ಯಾಂಡ್, ಮೇಘಾಲಯ ರಾಜ್ಯ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಬಿಜೆಪಿ ವರಿಷ್ಠರು ಈಗಾಗಲೇ ಮಾಡಿದ್ದಾರೆ.

ಇದಕ್ಕೆ ಪೂರಕ ಎನ್ನುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯ ರಾಗಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿದರೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಒಕ್ಕಲಿಗ ಸಮುದಾಯಕ್ಕೆ ನೀಡಬೇಕು ಎಂದು ಹೈಕಮಾಂಡ್ ಮುಂದೆ ಯಡಿಯೂರಪ್ಪ ಅಚ್ಚರಿಯ ಹೆಸರನ್ನು ಸೂಚಿಸಿದ್ದರು. ಈ ಹಿಂದೆ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನ ನೇಮಕದ ಕುರಿತು ಹೈಕಮಾಂಡ್ ತಡೆಹಿಡಿದು ಮುಂದಕ್ಕೆ ಹಾಕಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಬಿವೈ ವಿಜಯೇಂದ್ರ ನನ್ನ ತಂದೆ ಬಿಎಸ್ ಯಡಿಯೂರಪ್ಪ ಮುನ್ನೆಲೆಗೆ ಬರುತ್ತಿರುವುದು ವಿಶೇಷ ಏನಿಲ್ಲ ಯಡಿಯೂರಪ್ಪ ಸೇರಿ ಅನೇಕ ಹಿರಿಯ ನಾಯಕರು ಪಕ್ಷ ಕಟ್ಟಿ ಬೆಳೆಸಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾರ್ಯಕರ್ತರನ್ನು ಸಜ್ಜು ಮಾಡುವ ಕೆಲಸ ಮಾಡುತ್ತಿದ್ದಾರೆ.

ನಾನು ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲಾರೆ. ಪಕ್ಷದ ವರಿಷ್ಠರು ಕೂತು ತೀರ್ಮಾನ ಕೈಗೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರಹೇಳಿದ್ದಾರೆ.

Related Articles

Back to top button
error: Content is protected !!