ಶಿಕ್ಷಣ

ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ: ಉಡುಪಿ ಜಿಲ್ಲೆಯ ಇಬ್ಬರು,ದ.ಕ ಜಿಲ್ಲೆಯ ಒಬ್ಬರಿಗೆ ಪ್ರಶಸ್ತಿ 

Views: 0

ಉಡುಪಿ/ಮಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರು ಹಾಗೂ ಪ್ರಾಂಶುಪಾಲರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಕಲಾ ಶಿಕ್ಷಕ ನರೇಂದ್ರ ಹಾಗೂ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ‌ ಮಂಜುನಾಥ ಭಟ್

ದ.ಕ. ಜಿಲ್ಲೆಯ ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕುಮಾರ ಅವರಿಗೆ ಪ್ರಶಸ್ತಿ ಬಂದಿದೆ.

ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಶಾಲೆಯ 20, ಪ್ರೌಢಶಾಲೆಯ 10 ಮತ್ತು ಪದವಿಪೂರ್ವ ಕಾಲೇಜಿನ ಇಬ್ಬರು ಪ್ರಾಂಶುಪಾಲರು ಮತ್ತು ಪದವಿ ಕಾಲೇಜಿನ 8 ಉಪನ್ಯಾಸಕರಿಗೆ ಪ್ರಶಸ್ತಿ ಬಂದಿದೆ.

Related Articles

Back to top button