ಜನಮನ

ರಾಯಚೂರಿನಲ್ಲಿ 44 ರಿಂದ 46°ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ:ರಣ ಬಿಸಿಲಿಗೆ ಇಬ್ಬರು ಬಲಿ

Views: 34

ರಾಯಚೂರು ಬಿಸಿಲಿನ ತಾಪದ ತೀವ್ರತೆ ಹೆಚ್ಚಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.ಎರಡು ಪ್ರತ್ಯೇಕ ಘಟನೆಗಳಲ್ಲಿ ಮಲ್ಲಯ್ಯ (45) ಹಾಗೂ ಆಂಜನೇಯ ಸಾವನ್ನಪ್ಪಿದ್ದಾರೆ. ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬಿಎಂಟಿಸಿ ಕಂಡಕ್ಟ್ ಆಗಿದ್ದ ಮಲ್ಲಯ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಲ್ಲಯ್ಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ನಿವಾಸಿ ಆಗಿದ್ದರು. ಇವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಮಧ್ಯಾಹ್ನದ ವೇಳೆ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ದುರಂತ ನಡೆದಿದೆ. ರಸ್ತೆಯಲ್ಲಿ ಕುಸಿದು ಬಿದ್ದ ತಕ್ಷಣ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಇನ್ನೊಂದು ಘಟನೆಯಲ್ಲಿ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲಿ ಅಂಜನೇಯ (45) ಎಂಬುವವರು ಮೃತಪಟ್ಟಿದ್ದಾರೆ. ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಬಿಸಿಲಿನ ಆರ್ಭಟ ತಾಳಲಾರದೇ ಸುಸ್ತಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಅಂದ್ಹಾಗೆ ನಿತ್ಯ ರಾಯಚೂರಲ್ಲಿ 44 ರಿಂದ 46°ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಅನಾವಶ್ಯಕವಾಗಿ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Related Articles

Back to top button
error: Content is protected !!