ಇತರೆ

ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ 

Views: 190

ಚಿತ್ರದುರ್ಗ: ದರ್ಶನ್ ಮತ್ತು ಗ್ಯಾಂಗ್ ನಿಂದ ಹತ್ಯೆಯಾದ ಚಿತ್ರದುರ್ಗದ  ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನನ ನೀಡಿದ್ದಾರೆ. ಇಂದು ಬೆಳಗಿನ ಜಾವ 7 ಗಂಟೆ 1 ನಿಮಿಷಕ್ಕೆ ಮುದ್ದಾದ ಮಗುವನ್ನು ಬರಮಾಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಸಮಯದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದು, ಮನೆಯಲ್ಲಿಯೇ ವಿಶ್ರಾಂತಿಯಲ್ಲಿದ್ದರು. ಇದೇ ಸಮಯದಲ್ಲಿ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಕೊಲೆ ಮಾಡಿದ್ದರು.

ಸಹನಾ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನವಾಯಿತು.

ಇತ್ತ ಮನೆ ನೋಡಿಕೊಳ್ಳಬೇಕಾದ ಮಗ ರೇಣುಕಾಸ್ವಾಮಿ ಕೊಲೆಯಾದ ಬಳಿಕ ಕಣ್ಣೀರಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬ ಇದೀಗ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಮೂಲಕ ಸಂತಸಗೊಂಡಿದ್ದಾರೆ.

ಮಗನ ನೆನಪಿನಲ್ಲೇ ಕಳೆಯುತ್ತಿದ್ದ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಮೊಮ್ಮಗ ಬಂದ ಬಳಿಕ ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ನಗು ಬೀರಿ ಮಾತನಾಡಿದ್ದಾರೆ. ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ ಎಂದಿದ್ದಾರೆ.

ಕಣ್ಣೀರು ಹಾಕುತ್ತಲೇ ಮಗ ರೇಣುಕಾಸ್ವಾಮಿಯನ್ನು ಕಾಶೀನಾಥ ಶಿವನಗೌಡ್ರ ನೆನೆದಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ನಾನು ವೈದ್ಯರು ಹಾಗೂ ಸಿಬ್ಬಂದಿಗೆ ಚಿರರುಣಿ ಎಂದು ಹೇಳಿದ್ದಾರೆ.

Related Articles

Back to top button
error: Content is protected !!