ಸಾಂಸ್ಕೃತಿಕ

ರೇಣುಕಾಸ್ವಾಮಿ ಹತ್ಯೆ: ನಿರ್ಲಕ್ಷ್ಯವಹಿಸಿದ್ದರೆ ಪ್ರಕರಣ ಬೇರೆ ದಾರಿಯತ್ತ, ಪೊಲೀಸ್ ಆಯುಕ್ತ ಬಿ.ದಯಾನಂದ್ 

Views: 89

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೃತ್ಯದಲ್ಲಿ ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೆ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಿ ಎಲ್ಲಾ ಆಯಾಮಗಳಿಂದ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಕೃತ್ಯವನ್ನು ಅತ್ಯಂತ ಜಾಗರೂಕತೆಯಿಂದ ತಂತ್ರಜ್ಞಾನ ಸೇರಿದಂತೆ ಸಾಕ್ಷ್ಯಾಧಾರಗಳನ್ನು ಆಧರಿಸಿ ಸಮರ್ಪಕ ರೀತಿಯಲ್ಲಿ ಪ್ರಕರಣದ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

ಪ್ರಕರಣವಯ ಗಂಭೀರ ಸ್ವರೂಪದಲ್ಲಿ ಇರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಿ ಅಗತ್ಯ ಸಿಬ್ಬಂದಿಗಳನ್ನು ಒದಗಿಸಿ ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ನುರಿತ ಇನ್ಸ್‌ಪೆಕ್ಟರ್‌ಗಳು ತಂಡದಲ್ಲಿ ತನಿಖೆ ನಡೆಸುತಿದ್ದು, ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ ಎಂದರು.

Related Articles

Back to top button
error: Content is protected !!