ಸಾಂಸ್ಕೃತಿಕ

ರೇಣುಕಾ ಸ್ವಾಮಿ ಹತ್ಯೆ:ದರ್ಶನ್ ಗ್ಯಾಂಗ್ ಜೊತೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಖ್ಯಾತ ಹಾಸ್ಯ ನಟ  ಚಿಕ್ಕಣ್ಣನಿಗೆ ಢವ ಢವ..!

Views: 113

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣನಿಗೆ ಢವ ಢವ ಶುರುವಾಗಿದೆ.

ರೇಣುಕಾ ಸ್ವಾಮಿ ಕೊಲೆಯಾದ ಜೂ.9 ರಂದು ದರ್ಶನ್ ಜೊತೆ ಹಾಸ್ಯ ನಟ ಚಿಕ್ಕಣ್ಣ ಮೈಸೂರಿನ ಸ್ಟೋನಿ ಬ್ರೂಕ್‌ನಲ್ಲಿ ಪಾರ್ಟಿ ಮಾಡಿದ್ದು,ಅದರಲ್ಲಿ ದರ್ಶನ್ ಮತ್ತವರ ಗ್ಯಾಂಗ್ ಪಾಲ್ಗೊಂಡಿತ್ತು.

ಮಧ್ಯಾಹ್ನದಿಂದ ಪಾರ್ಟಿ ನಡೆದಿದ್ದು, ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ದರ್ಶನ್ ಎದ್ದು ಹೊರಟಿದ್ದು ಕೃತ್ಯಕ್ಕೆ ಮುನ್ನ ನಡೆಸಿದ ಪಾರ್ಟಿಯ ಸಂಬಂಧ ರೇಣುಕಾ ಸ್ವಾಮಿ ಕೊಲೆ ಕೃತ್ಯದ ತನಿಖೆಯನ್ನು ನಡೆಸುತ್ತಿರುವ ಪೊಲೀಸರು ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದರೂ ಚರ್ಚೆಯಾಗಿದ್ದರ ಮಾಹಿತಿ ಪಡೆಯುವ ಸಲುವಾಗಿ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡೆದಿದ್ದಾರೆ. ಸದ್ಯ ಚಿಕ್ಕಣ್ಣನನ್ನು ಸಾಕ್ಷಿಯಾಗಿ ಪರಿಗಣಿಸಲು ಪೊಲೀಸರು ಮುಂದಾಗಿದ್ದು, ಈ ಬಗ್ಗೆ ಚಿಂತನೆ ನಡೆಸಲಾಗಿದೆ, ಕೊಲೆಯ ಬಗ್ಗೆ ಮಾಹಿತಿ ಇಲ್ಲದೆ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಿಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪೊಲೀಸರು ಚರ್ಚೆ ನಡೆಸುತ್ತಿದ್ದಾರೆ. ಇನ್ನು ಘಟನೆ ನಡೆಯುವ ಮುನ್ನವೇ ಪಾರ್ಟಿ ಮುಗಿಸಿ ಚಿಕ್ಕಣ್ಣ ತೆರಳಿದ್ದರು.

Related Articles

Back to top button
error: Content is protected !!