ಇತರೆ

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Views: 46

ಕನ್ನಡ ಕರಾವಳಿ ಸುದ್ದಿ: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಸುಮಾರು 9 ಗಂಟೆಯ ಸುಮಾರಿಗೆ ಪಾಟ್ನಾ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್‌ಫಾರ್ಮ್ ಸಂಖ್ಯೆ 2ಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ತಕ್ಷಣವೇ ಅವರನ್ನು ಬಾರ್ ಸದರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಈ ಸಂಬಂಧ ರೈಲ್ವೆ ರಕ್ಷಣಾ ಪಡೆ  ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ದುರಂತದ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮನವಿ ಮಾಡಿದ್ದಾರೆ. ರೈಲುಗಳು ನಿಲ್ದಾಣಕ್ಕೆ ಬರುವಾಗ ಅಥವಾ ಹೊರಡುವಾಗ ಪ್ಲಾಟ್‌ಫಾರ್ಮ್‌ನ ಅಂಚಿನಿಂದ ದೂರವಿರುವಂತೆ ಸೂಚಿಸಲಾಗಿದೆ. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಾಯಗಳನ್ನು ತಪ್ಪಿಸಿಕೊಳ್ಳಲು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.

Related Articles

Back to top button
error: Content is protected !!