ಆರೋಗ್ಯ

ರೋಗಿ ಕೊಳಲು ನುಡಿಸುವಾಗಲೇ ಯಶಸ್ವಿ ಮೆದುಳು ಶಸ್ತ್ರಚಿಕಿತ್ಸೆ; ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Views: 84

ಬೆಳಗಾವಿ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಯಶಸ್ವಿ ಮೆದುಳು ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಬೆಳಗಾವಿಯ ಕೊಲ್ಲಾಪುರದ ಕನ್ಹೇರಿ ಮಠದ ಸಿದ್ದಗಿರಿ ಆಸ್ಪತ್ರೆ ವೈದ್ಯರು ರೋಗಿಯು ಕೊಳಲು ಊದುವಾಗಲೇ ಮೆದುಳು ಆಪರೇಷನ್ ಮಾಡಿದ್ದಾರೆ.

ವ್ಯಕ್ತಿಯ ಬ್ರೇನ್‌ನಲ್ಲಿ ಬೆಳೆದ ಟ್ಯೂಮರ್‌ ಅನ್ನು ಸುಮಾರು 5 ಗಂಟೆಗಳ ಕಾಲ ಆಪರೇಷನ್ ಮಾಡಿ ಗಡ್ಡೆ ಹೊರ ತೆಗೆದಿದ್ದಾರೆ. ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ.ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ.

ವೈದ್ಯರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ವೈದ್ಯರ ತಂಡ ಈವರೆಗೂ ಒಟ್ಟು ಮಂದಿಗೆ 103 ಮೆದುಳು ಶಸ್ತ್ರ‌ಚಿಕಿತ್ಸೆ ಮಾಡಿದೆ. ಸಿದ್ದಗಿರಿ ಆಸ್ಪತ್ರೆ ಅವೇಕ್ ಕ್ರೇನಿಯೊಟಮಿ ಶಸ್ತ್ರಚಿಕಿತ್ಸೆಗೆ ಹೆಸರುವಾಸಿಯಾಗಿದೆ. ವೈದ್ಯರ ಸಾಧನೆಗೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶ್ಲಾಘಿಸಿದ್ದಾರೆ.

Related Articles

Back to top button