ಇತರೆ
ರೌಡಿಗಳ ಜತೆ ಪಾರ್ಟಿ: ಎಎಸ್‌ಐ ಅಮಾನತು
Views: 22
ಕನ್ನಡ ಕರಾವಳಿ ಸುದ್ದಿ: ರೌಡಿ ಶೀಟರ್‌ಗಳ ಜತೆ ಎಣ್ಣೆ ಪಾರ್ಟಿ ಮಾಡಿದ್ದ ಎಎಸ್‌ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ವೀರೇಂದ್ರ ಅವರನ್ನು ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಆದೇಶ ಹೊರಡಿಸಿದ್ದಾರೆ.
ಸುಮಾರು ಒಂದು ವಾರದ ಹಿಂದೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದ ಬಾರ್ ಒಂದರಲ್ಲಿ ಎಎಸ್‌ಐ ವೀರೇಂದ್ರ ಅವರು ರೌಡಿ ಶೀಟರ್‌ಗಳೊಂದಿಗೆ ಪಾರ್ಟಿ ಆಯೋಜಿಸಿ, ಇಡೀ ರಾತ್ರಿ ಜೋರಾಗಿ ಹಾಡುಗಳನ್ನು ಹಾಕಿಕೊಂಡು ಮಜಾ ಮಾಡುತ್ತಿದ್ದರು. ಇದನ್ನು ವಿರೋಧಿಸಿ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಬಾರ್ ಮುಂಭಾಗ ರಾತ್ರೋರಾತ್ರಿ ಧರಣಿ ನಡೆಸಿ, ಬಾರ್ ಬಂದ್ ಮಾಡುವಂತೆ ಆಗ್ರಹಿಸಿದ್ದರು.






