ಲಕ್ಷ್ಮಣ ಸವದಿ ಭರ್ಜರಿ ಆಪರೇಷನ್!. ಬಿಜೆಪಿಗೆ ಶಾಕ್.! ಕಾಂಗ್ರೆಸ್ ನಾಯಕರಿಗೆ ಆನೆಬಲ..ಕೊಪ್ಪಳ ಸಂಸದ ಕರಡಿ ಸಂಗಣ್ಣ ಸಂಸದ ಹಾಗೂ ಬಿಜೆಪಿ ಪಕ್ಷಕ್ಕೆ ರಾಜಿನಾಮೆ

Views: 55
ಕೊಪ್ಪಳ: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವಾಗಲೇ ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೊದಲ ವಿಕೆಟ್ ಪತನವಾಗಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪಕ್ಷಕ್ಕೂ ಇಂದು ರಾಜೀನಾಮೆ ನೀಡಿದ್ದಾರೆ.
ಕರಡಿ ಸಂಗಣ್ಣ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಇದರ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸಲ್ಲಿಸಿದ್ದಾರೆ.
ಸಂಸದ ಕರಡಿ ಸಂಗಣ್ಣ ಅವರು ಈ ಬಾರಿಯೂ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಈ ಬಾರಿ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಪಕ್ಷಕ್ಕೆ ಗುಡ್ಬೈ ಹೇಳಿರುವ ಕರಡಿ ಸಂಗಣ್ಣ ಅವರು ನಾಳೆಯೇ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.
ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ರಾಜೀನಾಮೆಯ ಹಿನ್ನೆಲೆಯಲ್ಲಿ ಕೊಪ್ಪಳ ಕಾಂಗ್ರೆಸ್ ನಾಯಕರಿಗೆ ಆನೆ ಬಲ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಈಗಾಗಲೇ ಕರಡಿ ಸಂಗಣ್ಣ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಕರಡಿ ಸಂಗಣ್ಣ ಅವರು ನಾಳೆಯೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಕರಡಿ ಸಂಗಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.






