ಲವ್ ಫೇಲ್ ಪ್ರೇಯಸಿ ಎದುರೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ
Views: 46
ಕನ್ನಡ ಕರಾವಳಿ ಸುದ್ದಿ :ಪ್ರೀತಿಯಲ್ಲಿ ಮನಸ್ತಾಪ ಉಂಟಾಗಿ ಯುವಕನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿದ್ದು, ಮಂಗಳವಾರ ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ ಕಿರಣ್, ಮಾತನಾಡಲೆಂದು ಆಕೆಯ ಮನೆಗೆ ತೆರಳಿದ್ದಾನೆ
ಮನೆಗೆ ಪೆಟ್ರೋಲ್ ಸಮೇತ ಬಂದಿದ್ದ ಕಿರಣ್, ಯುವತಿಯೊಂದಿಗೆ ಜೋರಾಗಿ ಗಲಾಟೆ ಮಾಡಿಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದಾಗ ತಾನು ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಅಷ್ಟಕ್ಕೇ ನಿಲ್ಲದ ಕಿರಣ್, ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.
ಈ ವೇಳೆ ಕಿರುಚಾಡುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿಗೆ ಸಣ್ಣಪುಟ್ಟ ಸುಟ್ಟಗಾಯಗಳಾಗಿದ್ದು, ಬೆಂಕಿಯ ತೀವ್ರತೆಗೆ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






