ಶಿಕ್ಷಣ

ಲವ್ ಮಾಡುವಂತೆ ಸಹಪಾಠಿ ಒತ್ತಾಯ: ಶಾಲೆಯ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Views: 102

ಕನ್ನಡ ಕರಾವಳಿ ಸುದ್ದಿ: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದರಿಂದ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಭೆಮಳಖೇಡ ಗ್ರಾಮದ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!