ಇತರೆ
ಲಾರಿ -ಕಾರು ಡಿಕ್ಕಿ: ಮೂವರ ದುರ್ಮರಣ

Views: 0
ತುಮಕೂರು: ಕಾರು ಲಾರಿಗೆ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.
ಆಕಾಶ್ (20) ಹೇಮಂತ್ (28) ಶಿವಕುಮಾರ್ ಮೃತ ದುರ್ದೈವಿಗಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದರೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ.
ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






