ರಾಜಕೀಯ

ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲು

Views: 39

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಲ್ ಕೃಷ್ಣ ಅಡ್ವಾಣಿಗೆ 96ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಆರೋಗ್ಯ ಏರುಪೇರಾಗುತ್ತಿದೆ.

ಕಳೆದ ವಾರವೂ ಭಾರತದ ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರನ್ನು ಜೂನ್‌ 26 ರಂದು ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಮರು ದಿನವೇ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದರು.

 

Related Articles

Back to top button
error: Content is protected !!