ಆರೋಗ್ಯ

ಲೈಂಗಿಕ ಶಕ್ತಿ ಹೆಚ್ಚಿಸುವುದಾಗಿ ವಂಚನೆ: ನಕಲಿ ಗುರೂಜಿ ಸಹಚರನ ಬಂಧನ

Views: 55

ಕನ್ನಡ ಕರಾವಳಿ ಸುದ್ದಿ: ಟೆಕ್ಕಿ ತೇಜಸ್ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರು. ವಂಚಿಸಿದ ವಿಜಯ್ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಗುರೂಜಿಯ ಸಹಚರನನ್ನೂ ಸಹ ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ.

ವಿಜಯ್ ಗುರೂಜಿ ಮತ್ತು ಆತನ ಸಹಚರರಿಂದ ಮೋಸ ಹೋದ ಟೆಕ್ಕಿ ತೇಜಸ್, ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಲ್ಲಿ ದೂರು ನೀಡಿದ್ದರು. ಅವರ ದೂರಿನ ಮೇರೆಗೆ ತೆಲಂಗಾಣ ಮೊಹಬೂಬ್ ನಗರದಲ್ಲಿ ವಿಜಯ್ ಗುರೂಜಿಯನ್ನು ಬಂಧಿಸಲಾಗಿತ್ತು. ಇದೀಗ ಆತನ ಸಹಚರ ಮನೋಜ್ ಸಿಂಗ್ ಚಿತ್ತೋಡಿಯಾನನ್ನು ತೆಲಂಗಾಣದ ಸೈಬರಬಾದ್ ನಲ್ಲಿ ಸೆರೆಹಿಡಿಯಲಾಗಿದೆ. ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿಗಳು, ಬೆಂಗಳೂರು, ತುಮಕೂರು ಸೇರಿ ಒಟ್ಟು ಎಂಟು ಟೆಂಟ್‌ಗಳನ್ನು ಹೊಂದಿದ್ದರು. ಆರೋಪಿಗಳಿಗೆ ಟೆಕ್ಕಿ ನೀಡಿದ್ದ 40 ಲಕ್ಷದಲ್ಲಿ 19.50 ಲಕ್ಷ ರು. ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿ ಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ.

ಸದ್ಯ ನಾವು ಆರೋಪಿಗಳನ್ನು ಬಂಧಿಸಿ ಹಣ ವಶಕ್ಕೆ ಪಡೆದಿದ್ದೇವೆ. ಯಾರಿಗೆ ಸಮಸ್ಯೆ ಇದೆಯೋ ಅವರು ಅಧಿಕೃತ ಆಸ್ಪತ್ರೆಗೆ ಭೇಟಿ ನೀಡಿ. ಟೆಂಟ್‌ಲ್ಲಿ ಇದ್ದವರ ಕಡೆ ಹೋದರೆ ಸಮಸ್ಯೆ ಆಗುತ್ತದೆ. ಈ ರೀತಿ ಕೆಲಸ ಮಾಡುತ್ತಿದ್ದವರ ವಿರುದ್ಧ ದೂರು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿ ಟೆಂಟ್‌ನಲ್ಲಿ ಚಿಕಿತ್ಸೆ ನೀಡುವವರ ದಾಖಲಾತಿ ಪರಿಶೀಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಚಿಕಿತ್ಸೆ ಪಡೆದಿದ್ದ ದೂರುದಾರನಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಆತನ ಜೀವಕ್ಕೂ ಅಪಾಯ ಉಂಟಾಗಬಹುದು. ಹೀಗಾಗಿ ಟೆಂಟ್‌ನಲ್ಲಿರುವ ವ್ಯಕ್ತಿಗಳ ಬಳಿ ಯಾರೂ ಚಿಕಿತ್ಸೆ ಪಡೆಯಬೇಡಿ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾ‌ರ್ ತಿಳಿಸಿದ್ದಾರೆ.

Related Articles

Back to top button