ಇತರೆ

ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಹಂಚಿಕೆ..!

Views: 53

ಗ್ಯಾರಂಟಿ ಕಾರ್ಡ್ ನೀಡಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಆಮಿಷ ಹುಟ್ಟುತ್ತಿದೆ ಎಂಬ ಆರೋಪಗಳ ಮಧ್ಯೆ ಇದೀಗ ಮತ್ತೆ ಗ್ಯಾರಂಟಿ ಕಾರ್ಡ್ ಹಂಚಿಕೆ ಆರಂಭಗೊಂಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಹಂಚಿಕೆ ಆರಂಭವಾಗಿದೆ

ಚಾಮರಾನಜಗರ :ಮತದಾರರನ್ನು ಸೆಳೆಯುವುದಕ್ಕಾಗಿ ‘ಗ್ಯಾರಂಟಿ ಕಾರ್ಡ್​’ಗಳನ್ನು ನೀಡುವುದರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರ ನಡುವೆಯೂ ಇದೀಗ ಕಾಂಗ್ರೆಸ್ ಪಕ್ಷವು ಆ ಕೆಲಸವನ್ನು ಮುಂದುವರಿಸಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ ನೀಡಿದ್ದ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಅದನ್ನೇ ಮಾಡಲು ಶುರು ಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಗ್ಯಾರಂಟಿ ಕಾರ್ಡ್ ಹಂಚಿಕೆ ಶುರುಮಾಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್ ಹಂಚಿಕೆ ಯಶಸ್ವಿಯಾದ ಕಾರಣ, ಇದೀಗ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸುನೀಲ್ ‌ಬೋಸ್ ಪರ ಚುನಾವಣಾ ಪ್ರಚಾರದಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಯಿತು.

ಮಹಿಳೆಯರ ಹೆಸರು, ಆಧಾರ್ ಕಾರ್ಡ್ ನಂಬರ್, ಪೋನ್ ನಂಬರ್ ಮತ್ತಿತರ ವಿವರಗಳನ್ನು ಕೌಂಟರ್ ಫೈಲ್‌ಗೆ ಬರೆದುಕೊಂಡು ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಇದಕ್ಕಾಗಿ ಮನೆಯಿಂದ ಆಧಾರ್ ಕಾರ್ಡ್ ತಂದು ಮಹಿಳೆಯರು ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ.

ಪ್ರತಿ ಬಡಕುಟುಂಬದ ಒಬ್ಬ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂ., ವಿದ್ಯಾವಂತ ಯುವಕನಿಗೆ 1 ಲಕ್ಷ ರೂ. ವೇತನದ ಮೊದಲ ಉದ್ಯೋಗದ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡುತ್ತಿದೆ. ಅಲ್ಲದೆ, ರೈತರ ಸಾಲ ಮನ್ನಾ ಸೇರಿದಂತೆ ಪಂಚ ಗ್ಯಾರಂಟಿಗಳ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ

Related Articles

Back to top button
error: Content is protected !!