ಶಿಕ್ಷಣ

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್: ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸತತ 16ನೇ ಬಾರಿಗೆ ಶೇ.100 ಫಲಿತಾಂಶ

Views: 54

ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಕೋಟೇಶ್ವರ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸತತ 16ನೇ ಬಾರಿಗೆ ಶೇ. 100 ಫಲಿತಾಂಶ ದಾಖಲಿಸಿದೆ. 

ಪರೀಕ್ಷೆಗೆ ಹಾಜರಾದ ಒಟ್ಟು 141 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 89 ಪ್ರಥಮ ಶ್ರೇಣಿಯಲ್ಲಿ 25 ದ್ವಿತೀಯ ಶ್ರೇಣಿ ಹಾಗೂ 6 ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರತಿಷ್ಠಿತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಯ ಗುಣಮಟ್ಟವನ್ನು ಎತ್ತಿ ಹಿಡಿದಿದ್ದಾರೆ. 

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಭಾಂಡ್ಯ ಸುಭಾಷ್ ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್ ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಶಾಲೆಯ ಪ್ರಾಂಶುಪಾಲರು,ಬೋಧಕ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Back to top button
error: Content is protected !!