ಶಿಕ್ಷಣ

ವಕ್ವಾಡಿ ಗುರುಕುಲ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ 

Views: 50

ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ  78ನೇ ಸ್ವಾತಂತ್ರ್ಯದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಮತ್ತು ಶ್ರೀಮತಿ ಅನುಪಮಾ ಶೆಟ್ಟಿ ಇವರು78ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ತದನಂತರ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳ ನಡುವೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ತಂಡಗಳ ವಿದ್ಯಾರ್ಥಿಗಳು ಏಕ ಪಾತ್ರಾಭಿನಯ ಮತ್ತು ಹಾಡಿನ ಮೂಲಕ ತಮ್ಮಲ್ಲಿರುವ ದೇಶಭಕ್ತಿಯನ್ನು ಇನ್ನಷ್ಟು ಇಮ್ಮಡಿಗೊಳಿಸಿಕೊಂಡು,ಎಲ್ಲರ ಕಣ್ಮನಗಳನ್ನು ತಣಿಸಿದರು.

ಶಿಕ್ಷಕರು ಸೈನಿಕ ವಿಷಯವನ್ನಾಧರಿಸಿ ಕಿರುನಾಟಕವನ್ನು ಮಾಡುವ ಮೂಲಕ ಸೈನಿಕರ ಬದುಕಿನ ಮಹತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ಸುನಿಲ್ ಪ್ಯಾಟ್ರಿಕ್, ಕಾಲೇಜು ಪ್ರಾಂಶುಪಾಲರಾದ ಶ್ರೀ ಅವಿನಾಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಮಾl ಅರ್ಜುನ್, ಉಮೇಶ್.ನಿರೂಪಿಸಿ,ವಂದಿಸಿದರು.

Related Articles

Back to top button