ಶಿಕ್ಷಣ
ವಕ್ವಾಡಿ ಸರಕಾರಿ ಪ್ರೌಢಶಾಲೆ : ಪ್ರತಿಭಾ ಪುರಸ್ಕಾರ

Views: 12
ಕುಂದಾಪುರ: ವಕ್ವಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಡಿ.15 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು.
ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಸ್ರೂರು ನಿವೇದಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ. ಶ್ರೀ ದಿನಕರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ , ರವಿರಾಜ ಶೆಟ್ಟಿ , ಎಸ್‌ಡಿಎಂಸಿ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತ ಹೊಳ್ಳ ಮತ್ತು ಶಿಕ್ಷಕ ವೃಂದ ದವರು ಹಾಗೂ ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಶಿಕ್ಷಕ ದೇವರಾಜ್ ಹೆಬ್ಬಾರ್ ಸ್ವಾಗತಿಸಿ, ಸುರೇಶ್ ಪೂಜಾರಿ ವಂದಿಸಿದರು. ಕೆ.ಉಷಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.