ವಕ್ವಾಡಿ ಸರಕಾರಿ ಪ್ರೌಢಶಾಲೆ:ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ
Views: 104
ಕನ್ನಡ ಕರಾವಳಿ ಸುದ್ದಿ: ಯುವ ಪೀಳಿಗೆಯಲ್ಲಿ ಸದೃಢ ಆರೋಗ್ಯ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಮಾದಕವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಕ್ವಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ ಜುಲೈ18ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕುಂದಾಪುರ ASI ಶ್ರೀ ಶಾಂತರಾಜು ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಹದಿಹರೆಯದವರು ತಪ್ಪು ದಾರಿಗೆ ತುಳಿಯದಂತೆ ತಡೆಯಲು ಇಂತಹ ಮಾಹಿತಿ ಕಾರ್ಯಾಗಾರಗಳು ದಾರಿದೀಪವಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಕ್ಲಸ್ಟರ್ CRP ಶ್ರೀಮತಿ ಶೈಲಾ ಇವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಚಿತ್ರಕಲೆ,ಘೋಷಣೆಗಳು, ಪೋಸ್ಟರ್ಗಳನ್ನು ಮಾಡುವ ಸ್ಪರ್ಧೆಗಳನ್ನು ಏರ್ಪಡಿಸಿ ವೀಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕುಸುಮಾಕರ ಶೆಟ್ಟಿ ಕಾರ್ಯಕ್ರಮದ ನಿರೂಪಿಸಿದರು. ಮುಖ್ಯೋಪಾಧ್ಯಾಯರು , ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.







