ವಕ್ವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ
Views: 0
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.
ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅನಂತ ಪದ್ಮನಾಭ ಶೆಟ್ಟಿಗಾರರು ನೆರವೇರಿಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತ್ಯರಂಜನ್ ಹೆಗ್ಡೆಯವರು ವೇದಿಕೆಯಲ್ಲಿ ದೀಪ ಬೆಳಗಿಸಿದರು. ಯುವ ಶಕ್ತಿ ಮಿತ್ರ ಮಂಡಳಿ ಅಧ್ಯಕ್ಷರಾದ ಪ್ರಮೋದ್ ಉಪಾಧ್ಯಯ 6 ನೇ ತರಗತಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಮಾಡಲು Tv ಯನ್ನು ದೇಣಿಗೆಯಾಗಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕರಾದ ಕರುಣಾಕರ ಶೆಟ್ಟಿ, ರತ್ನಾಕರ ಶೆಟ್ಟಿ, ಸಂತೋಷ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹ ಪೂಜಾರಿ,ಸೀತಾರಾಮ್ ಶೆಟ್ಟಿ, ಚೈತ್ರ, ಭಾರತಿ, ರಶ್ಮಿ ಶೆಟ್ಟಿ, ಕೆಡಿಪಿ ಸದಸ್ಯರಾದ ರಮೇಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ಬಳಗದವರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು. ನಯನ ಟೀಚರ್ ಕಾರ್ಯಕ್ರಮ ನಿರೂಪಿಸಿದರು. ಅನಿತಾ ಟೀಚರ್ ವಂದಿಸಿದರು.








