ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಸರ್ಕಾರಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಪ್ರಥಮ ಸ್ಥಾನದಲ್ಲಿ ಚಾರಿತ್ರ್ಯ 625 ರಲ್ಲಿ 603 ಶೇ.96.48, ದ್ವಿತೀಯ ಆಧ್ಯಾಶ್ರೀ ಆಚಾರ್ಯ 625 ರಲ್ಲಿ 591 ಶೇ.94.56, ತೃತೀಯ ಕ್ರೃತಿ 625 ರಲ್ಲಿ 566 ಶೇ.90.56 ಪಡೆದಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ A+ 03 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು. ಚಾರಿತ್ರ್ಯ ಪ್ರಥಮ ಭಾಷೆ ಕನ್ನಡ 125 ಕ್ಕೆ 125, ಹಿಂದಿ ತೃತೀಯ ಭಾಷೆ ಚಾರಿತ್ರ್ಯ100 ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.
ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.