ವಕ್ವಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Views: 312
ಕುಂದಾಪುರ :ಸರಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಹಾಲಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಉಪನ್ಯಾಸಕರಾದ ಯೋಗ ಗುರುಗಳಾದ ಶ್ರೀ ಕುಮಾರ್ ವಿಶ್ವ ಯೋಗ ದಿನವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಯೋಗದ ಉಪಯೋಗ ಮತ್ತು ಮಹತ್ವದ ಬಗ್ಗೆ ಉಪನ್ಯಾಸ ನೀಡುತ್ತಾ, ದೈಹಿಕ ವ್ಯಾಯಾಮ ಅಸನಗಳಿಂದ ಮುಂದುವರಿದು ಮನಸ್ಸು ಬುದ್ಧಿಯನ್ನು ನಿಯಂತ್ರಿಸುವ ಜ್ಞಾನ ಸಂಪಾದನೆಯ ಯೋಗ ಆಂತರಿಕ ಶುದ್ದಿಯಾಗಿ ಬಹಿರಂಗದಲ್ಲಿ ನಲಿವು ಗೆಲುವು ಜಾಸ್ತಿಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಹಲವು ಆಸನಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಸುಜಾತ ಎಂ ವಹಿಸಿಕೊಂಡು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿ ಕುಮಾರಿ ಶ್ರೀಯ ಕಾರ್ಯಕ್ರಮ ನಿರೂಪಿಸಿದರು ದೈಹಿಕ ಶಿಕ್ಷಕ ಕುಸುಮಾಕರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.