ಇತರೆ

ವರದಕ್ಷಿಣೆ ಕಿರುಕುಳ: ಗಂಡನ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Views: 12

ಕನ್ನಡ ಕರಾವಳಿ ಸುದ್ದಿ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮಮತಾಶ್ರೀ (26) ಮೃತ ದುರ್ದೈವಿ. ಕಳೆದ 5 ವರ್ಷಗಳ ಹಿಂದೆ ಮೋಹನ್ ರೆಡ್ಡಿ ಹಾಗೂ ಮಮತಾಶ್ರೀ ವಿವಾಹವಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದ್ದು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹದಿಂದ ಮನನೊಂದಿದ್ದ ಮಮತಾಶ್ರೀ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಡೆತ್‌ನೋಟ್‌ನಲ್ಲಿ ತಮ್ಮ ಮಗುವನ್ನು ಪೋಷಕರ ವಶಕ್ಕೆ ನೀಡುವಂತೆ ಹಾಗೂ ತನ್ನ ಅಂತ್ಯಸಂಸ್ಕಾರದಲ್ಲಿ ಪತಿ ಪಾಲ್ಗೊಳ್ಳಬಾರದು ಎಂದು ಬರೆದಿದ್ದಾರೆ ಎನ್ನಲಾಗಿದೆ. ಮೃತ ಮಮತಾಶ್ರೀ ತಂದೆ ನೀಡಿದ ದೂರಿನ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Related Articles

Back to top button
error: Content is protected !!