ಶಿಕ್ಷಣ
ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನಿಗೂಢ ಸಾವು: ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಆರೋಪ

Views: 195
ಕನ್ನಡ ಕರಾವಳಿ ಸುದ್ದಿ: ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಕೊಠಡಿಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಏಕಲವ್ಯ ವಸತಿ ಶಾಲೆಯ ಹಾಸ್ಟೇಲ್ ನಲ್ಲಿ 8ನೇ ತರಗತಿ ವಿದ್ಯಾರ್ಥಿ ಅನುಮನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಅಭಿಲಾಷ್ (13) ಮೃತ ವಿದ್ಯಾರ್ಥಿ
ನಿನ್ನೆ ಮಧ್ಯಾಹ್ನ ಊಟದ ಬಳಿಕ ಬಾಲಕ ತೀವ್ರ ಅಸ್ವಸ್ಥನಾಗಿದ್ದ. ಬಾಲಕ ಅಸ್ವಸ್ಥನಾಗಿದ್ದರೂ ವಾರ್ಡನ್ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಸ್ಟೇಲ್ ಕೊಠಡಿಯಲ್ಲಿ ಮಲಗಿದ್ದ ಬಾಲಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಬಾಲಕ ಅಸ್ವಸ್ಥನಾಗಿದ್ದರೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ್ದೇ ಸಾವಿಗೆ ಕಾರಣವಗಿದೆ. ವಾರ್ಡನ್ ಹಾಗೂ ಪ್ರಾಂಶುಪಾಲರ ನಿರ್ಲಕ್ಷಕ್ಕೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.