ಶಿಕ್ಷಣ

ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Views: 47

ಕನ್ನಡ ಕರಾವಳಿ ಸುದ್ದಿ:ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ.

ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿಗೆ ಶರಣಾದವರು.

ತುರುವೇಕೆರೆ ತಾಲೂಕಿನ ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್, ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ ಆತ ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು ಕರೆ ಮಾಡಿದರೂ ರಿಸೀವ್ ಮಾಡದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಡಿಪ್ಲೊಮಾ ಕಾಲೇಜಿನ ಹಿಂಭಾಗ ಇರುವ ಕಟ್ಟೆಯೊಂದರ ಬಳಿ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಕೊಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ. ಇದೇ ವೇಳೆ ನೀರಿನ ಕಟ್ಟೆ ಬಳಿ ವಿದ್ಯಾರ್ಥಿ ಧನುಷ್ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಟ್ಟೆಯಿಂದ ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿತ್ತು. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ… ಬಾಯ್” ಎಂದು ಬರೆದುಕೊಂಡು ನೀರಿನ ಕಟ್ಟೆಯ ಫೋಟೋ ಹಾಕಿದ್ದ ಎನ್ನಲಾಗಿದೆ. ಇದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಡೆದ ಘಟನೆಯೇ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!