ಕರಾವಳಿ
ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Views: 319
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ ಉತ್ತಮ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಸೆಪ್ಟೆಂಬರ್ 1 ಮತ್ತು 2ರಂದು ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಸೆ.3ರಿಂದ ಮುಂದಿನ 2 ದಿನ ಇನ್ನಷ್ಟು ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಲಬುರಗಿ, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸೆಪ್ಟೆಂಬರ್ 3ರಂದು ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರ ವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.