ಜನಮನ

ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ಇಂದಿನಿಂದ ಎ.5ರವರೆಗೆ ಗುಡುಗು ಸಹಿತ ಮಳೆ ಮುಸ್ಸೂಚನೆ

Views: 190

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆಯ ಪ್ರಕಾರ  ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿರುವ ಪರಿಣಾಮವಾಗಿ ರಾಜ್ಯದ ವಿವಿಧೆಡೆ ಹವಾಮಾನದಲ್ಲಿ ಏರುಪೇರಾಗಲಿದ್ದು, ವರುಣನ ಆಗಮನವಾಗಲಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಈ ಕೆಳಗಿನ ಭಾಗಗಳಲ್ಲಿ ಮಳೆಯ ಆರ್ಭಟವಿರಲಿದೆ: ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆಯಿದೆ. ಮಲೆನಾಡು ಭಾಗವಾದ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಹೊತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

 

Related Articles

Back to top button
error: Content is protected !!