ಜನಮನ

ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ

Views: 21

ಕನ್ನಡ ಕರಾವಳಿ ಸುದ್ದಿ:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದಿನಿಂದ ಸೆ.24ರವರೆಗೆ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಲಾಗಿದೆ.

ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ ಬಿರುಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಬೀಸುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಬಿರುಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಬೀಸುವ ಮುನ್ಸೂಚನೆಯಿದೆ.ಉಡುಪಿ, ರಾಯಚೂರು, ಕೋಲಾರ ಸಹಿತ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದಲ್ಲಿ ಈ ವಾರ ಹೆಚ್ಚಿನ ಭಾಗಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದ ಉಷ್ಣಾಂಶದಲ್ಲೂ ಕುಸಿತ ಕಂಡು ಬರಲಿದೆ.

 

Related Articles

Back to top button
error: Content is protected !!