ಜನಮನ

ವಾಯುಭಾರ ಕುಸಿತ: ಚಂಡಮಾರುತ ಭೀತಿ, ಅ.4 ರವರೆಗೆ ಭಾರಿ ಮಳೆ ಮುನ್ಸೂಚನೆ

Views: 127

ಕನ್ನಡ ಕರಾವಳಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕದಲ್ಲಿ ಇಂದಿನಿಂದ ಅ.4ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆಯಿದ್ದು, ನಂತರದ ದಿನಗಳಲ್ಲಿ ಚದುರಿದ ಮಳೆಯಾಗಲಿದೆ

ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಮಂಗಳೂರು ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಮತ್ತು 30ರಂದು ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯ ಸಾಧ್ಯತೆಯಿದ್ದು, ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 12-20 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಧ್ಯಮ ಮಳೆಯ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ 3-6 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆ ಮುಂದುವರಿಯಲಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕಡಲ ತೀರದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Related Articles

Back to top button
error: Content is protected !!