ಜನಮನ

ವಾಯುಭಾರ ಕುಸಿತ: ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆ! ಎಲ್ಲೆಲ್ಲಿ?

Views: 112

ಕನ್ನಡ ಕರಾವಳಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ  ತೀವ್ರಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ:  ವಾಯುಭಾರ ಕುಸಿತದ ಪ್ರಭಾವದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದೆ. ಕಡಲು ಕೋಭೆಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮಡಿಕೇರಿಯಲ್ಲಿ ಸದ್ಯ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ವರುಣನ ಆರ್ಭಟ ಶುರುವಾಗಲಿದೆ.

 

Related Articles

Back to top button
error: Content is protected !!